ತುಮಕೂರು| ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ!

0
Spread the love

ತುಮಕೂರು:- ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿ.ಎನ್ ರೆಡ್ಡಿ ನಿಧನ ಹೊಂದಿದ್ದಾರೆ.

Advertisement

ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ರೆಡ್ಡಿ ಅವರು ಅಗಲಿದ್ದಾರೆ. ಮೃತರ ಸ್ವಗ್ರಾಮ ವೆಂಕಟಪುರ ಗ್ರಾಮದ ಸಮೀಪದ ತೋಟದಲ್ಲಿ ಅಂತ್ಯಕ್ರಿಯೆ ನಡೆದಿದೆ. ವಿ.ಎನ್ ರೆಡ್ಡಿಯವರು ಬ್ರಿಟಿಷರ ಆಳ್ವಿಕೆಯ ದಾಖಲೆಗಳನ್ನು ನಾಶಪಡಿಸಲು ಇಲಿಗಳ ಬಾಲಕ್ಕೆ ಬಟ್ಟೆ ಸುತ್ತಿ, ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಪಾವಗಡ ತಾಲೂಕು ಕಛೇರಿಗೆ ಬಿಟ್ಟು ದಾಖಲೆಗಳನ್ನು ಸುಟ್ಟಿದ್ದರು. ಬ್ರಿಟಿಷರ ಖಜಾನೆ ಲೂಟಿ ಮಾಡಲು ಸಂಚು ರೂಪಿಸಿದ್ದರು. ಇದರಿಂದಾಗಿ ರಾತ್ರಿ ಮಲಗಿದ್ದ ವೇಳೆ ಪೊಲೀಸರು ವಿ.ಎನ್ ನರಸರೆಡ್ಡಿ ಸೇರಿದಂತೆ ಏಳು ಜನರನ್ನು ಬಂಧಿಸಿ ತುಮಕೂರು ಜೈಲಿಗೆ ಹಾಕಿದ್ದರು.

ಜೈಲಿನಲ್ಲಿಯೂ ಬ್ರಿಟಿಷ್ ಆಳ್ವಿಕೆ ವಿರುದ್ಧ ಪ್ರತಿಭಟನೆ, ಹೋರಾಟಗಳನ್ನು ಮುಂದುವರಿಸಿದ್ದರಿಂದ ತುಮಕೂರು ಜೈಲಿನಿಂದ ಬೆಂಗಳೂರು ಸೆಂಟ್ರಲ್ ಜೈಲಿಗೆ ಹಾಕಲಾಗಿತ್ತು. ಅವರು 32 ದಿನಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಜೈಲು ಶಿಕ್ಷೆ ಬಳಿಕ ಪಾವಗಡ ತಾಲೂಕಿನಾದ್ಯಂತ ಎತ್ತಿನಗಾಡಿಯಲ್ಲಿ ಸಂಚರಿಸಿ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟದ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿದ್ದರು.

ಇವರ ನಿಧನಕ್ಕೆ ರಾಜಕೀಯ ಮುಖಂಡರು ಸೇರಿ ಸಾಕಷ್ಟು ಗಣ್ಯರು ಕಂಬನಿ ಮಿಡಿದಿದ್ದಾರೆ.


Spread the love

LEAVE A REPLY

Please enter your comment!
Please enter your name here