HomeKarnataka Newsರಾಜ್ಯದಲ್ಲೇ ಫಸ್ಟ್ ಭರ್ತಿಯಾದ ತುಂಗಾ ಜಲಾಶಯ: 10 ಕ್ರೆಸ್ಟ್ ಗೇಟ್ʼಗಳ ಮೂಲಕ ನದಿಗೆ ನೀರು ಬಿಡುಗಡೆ

ರಾಜ್ಯದಲ್ಲೇ ಫಸ್ಟ್ ಭರ್ತಿಯಾದ ತುಂಗಾ ಜಲಾಶಯ: 10 ಕ್ರೆಸ್ಟ್ ಗೇಟ್ʼಗಳ ಮೂಲಕ ನದಿಗೆ ನೀರು ಬಿಡುಗಡೆ

For Dai;y Updates Join Our whatsapp Group

ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಶಿವಮೊಗ್ಗ ಜಿಲ್ಲೆಯ ಗಾಜನೂರು ಸಮೀಪದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲೇ ಮೊದಲಿಗೆ ಪೂರ್ಣ ಭರ್ತಿಯಾದ ಜಲಾಶಯ ಎಂಬ ಹೆಗ್ಗಳಿಕೆಗೆ ತುಂಗಾ ಡ್ಯಾಂ ಪಾತ್ರವಾಗಿದೆ.

ಜಿಲ್ಲೆಯಾದ್ಯಂತ ಕಳೆದ ಮೂರು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ತುಂಗಾ ಜಲಾಶಯಕ್ಕೆ ಒಳಹರಿವು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಜಲಾಶಯಕ್ಕೆ ಸದ್ಯ 20,565 ಕ್ಯೂಸೆಕ್ ನೀರು ಹರಿದುಬರುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ 10 ಕ್ರಸ್ಟ್ ಗೇಟ್‌ಗಳು ಹಾಗೂ 2 ಸ್ಲೂಯಿಸ್ (ತೂಬು) ಗೇಟ್‌ಗಳ ಮೂಲಕ ಒಟ್ಟು 18,051 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಹೊರಬಿಡಲಾಗುತ್ತಿದೆ.

ಜಲಾಶಯದ ಗರಿಷ್ಠ ನೀರಿನ ಮಟ್ಟ 588.24 ಮೀಟರ್ ತಲುಪಿದ್ದು, ಡ್ಯಾಂನಲ್ಲಿ 3.24 ಟಿಎಂಸಿ ನೀರು ಸಂಗ್ರಹವಾಗಿದೆ. ಶೃಂಗೇರಿ ಹಾಗೂ ತೀರ್ಥಹಳ್ಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ. ಅದರಂತೆ ನದಿಗೆ ಬಿಡಲಾಗುತ್ತಿರುವ ನೀರಿನ ಪ್ರಮಾಣವನ್ನೂ ಹೆಚ್ಚಿಸಲಾಗುವುದು ಎಂದು ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತುಂಗಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನದಿ ಪಾತ್ರದ ಎರಡೂ ದಡಗಳಲ್ಲಿರುವ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಡಳಿತ ಸೂಚಿಸಿದೆ. ನದಿ ತೀರದ ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಹಾಗೂ ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಜೊತೆಗೆ ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img