ಕೊಪ್ಪಳ: ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ. ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ. ತುಂಗಭದ್ರಾ ಜಲಾಶಯದಲ್ಲಿ ಕಳಚಿಕೊಂಡ 19ನೇ ಕ್ರಸ್ಟ್‌ಗೇಟ್ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ತುಂಗಭದ್ರಾ ಡ್ಯಾಂ ವಿಚಾರದಲ್ಲಿ ನಾನು ಯಾರ ಮೇಲೂ ವೈಯಕ್ತಿಕ ಆರೋಪ ಮಾಡಲ್ಲ.
ಆದ್ರೆ ಈ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯತನದ ವಿರುದ್ಧ ಸಿಬಿಐ ತನಿಖೆಯಾಗಬೇಕು. ಡ್ಯಾಂನ ವಾರ್ಷಿಕ ನಿರ್ವಹಣಾ ಗುತ್ತಿಗೆದಾರರು ಯಾರು? ಅವರಿಗೆ ಎಷ್ಟು ಕೋಟಿ ಹಣ ಸಂದಾಯ ಆಗಿದೆ? ಅಂತ ಸರ್ಕಾರ ಬಹಿರಂಗ ಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೇ ಗೇಟ್ ಅನ್ನು ನೀವು ಸರಿ ಮಾಡದಿದ್ದರೇ ಯಾರಾದ್ರೂ ಒಬ್ಬರು ಸರಿಪಡಿಸ್ತಾರೆ. ಆದ್ರೆ ಇದು ನಮ್ಮ ಭಾಗದ ರೈತರಿಗೆ ಆದ ದೊಡ್ಡ ಅನ್ಯಾಯ. ಸರ್ಕಾರ ಇದರ ಸಂಪೂರ್ಣ ಜವಾಬ್ದಾರಿ ಹೊರಬೇಕು, ನಿರ್ಲಕ್ಷತನ ತೋರಿದವರ ವಿರುದ್ಧ ಕ್ರಮ ಆಗಬೇಕು ಒತ್ತಾಯಿಸಿದ್ದಾರೆ.