ಕೊಪ್ಪಳ:- ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯಕ್ಕೆ ಸೆಪ್ಟೆಂಬರ್ 22 ರಂದು ಬಾಗಿನ ಅರ್ಪಿಸಲಿದ್ದಾರೆ.
ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ಬಳಿಕ ಈ ಬಗ್ಗೆ ಮಾತನಾಡಿದ ಡಿಕೆಶಿ ಅವರು, ತುಂಗಭದ್ರಾ ಡ್ಯಾಮ್ನ ಕ್ರಸ್ಟ್ ಗೇಟ್ ದುರಸ್ತಿ ಮಾಡಿ ನೀರುಳಿಸಿದ್ದೇವೆ. ಕೊಚ್ಚಿಹೋಗಿದ್ದ ಕ್ರಸ್ಟ್ ಗೇಟ್ ದುರಸ್ತಿಗಾಗಿ 108 ಜನ ದುಡಿದಿದ್ದಾರೆ ಹಾಗಾಗಿ ಅಂದು ಗಂಗಾ ಪೂಜೆ ಜೊತೆಗೆ 108 ಜನರಿಗೂ ಸನ್ಮಾನ ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ದೇವರ ಅನುಗ್ರಹದಿಂದ ಗೇಟ್ ದುರಸ್ಥಿಯನ್ನು ಒಂದೇ ವಾರದಲ್ಲಿ ಮುಗಿಸಲಾಯಿತು. ಇದರಿಂದ ಸಾಕಷ್ಟು ಪ್ರಮಾಣದ ನೀರನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಗೇಟ್ ದುರಸ್ಥಿ ಕಾರ್ಯದಲ್ಲಿ 108 ಸಿಬ್ಬಂದಿ ಮತ್ತು ಕಾರ್ಮಿಕರು ಹಗಲಿರಳು ದುಡದಿದ್ದಾರೆ. ಅವರಿಗೆ ಸನ್ಮಾನಿಸಲಾಗುವುದು. ಜಲಾಶಯ ಬರ್ತಿಗೆ ಇನ್ನು ನಾಲ್ಕು ಟಿಎಂಸಿ ನೀರು ಬೇಕಾಗಿದ್ದು, ನೀರನ್ನು ನಿಲ್ಲಿಸಲಿಕ್ಕೆ ಹೇಳಿದ್ದೇನೆ ಎಂದರು.