ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಸಿಂಗಟಾಲೂರು ಹತ್ತಿರದ ತುಂಗಭದ್ರಾ ನದಿಯನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಶುಕ್ರವಾರ ವೀಕ್ಷಿಸಿದರು. ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲೆಯ ಹಲವಾರು ಗ್ರಾಮಗಳಿಗೆ ಕುಡಿಯುವ ನೀರಿನ ಸರಬರಾಜು ಸಿಂಗಟಾಲೂರು ಗ್ಯಾರೇಜ್‌ನಿಂದ ಆಗುತ್ತಿದ್ದು, ನದಿಯ ನೀರಿನ ಮಟ್ಟ ಹಾಗೂ ನೀರೆತ್ತುವ ಸ್ಥಳದ ಕುರಿತು ಸ್ಥಳ ಪರಿಶೀಲನೆ ನಡೆಸಿದರು.
Advertisement
ಈ ಸಂದರ್ಭದಲ್ಲಿ ಮುಂಡರಗಿ ತಹಸೀಲ್ದಾರರು ಸೇರಿದಂತೆ ತಾಲೂಕಿನ ಇತರ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.