ಚೆನ್ನೈ: ತಮಿಳುನಾಡಿನ ಕೊಳತ್ತೂರು ಕ್ಷೇತ್ರದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಶಾಸಕ ವಿ.ಎನ್. ಬಾಬು (75) ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾರೆ.
ವಿ.ಎನ್. ಬಾಬು ಅವರು ಕಳೆದ ಕೆಲವು ಸಮಯದಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಎಂಜಿಎಂ ಹೆಲ್ತ್ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2.24ಕ್ಕೆ ಅವರು ಮೃತಪಟ್ಟಿದ್ದಾರೆ.
ಆಸ್ಪತ್ರೆಯು ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಮೂಲಕ ಅವರ ನಿಧನವನ್ನು ದೃಢಪಡಿಸಿದೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕೊಳತ್ತೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ವಿ.ಎನ್. ಬಾಬು, ಡಿಎಂಕೆ ನಾಯಕ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದೀಗ ಅವರ ನಿಧನದಿಂದ ಟಿವಿಕೆ ಪಕ್ಷಕ್ಕೆ ಆಘಾತ ಉಂಟಾಗಿದೆ.








