ಬೆಳಗಾವಿ:- ಕನ್ನಡ ಮಾತನಾಡು ಎಂದ ಬೆಳಗಾವಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸನ್ನು ದೂರುದಾರೆ ಹಿಂಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ಥೆಯ ತಾಯಿ ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ನಾವೂ ಸಹ ಕನ್ನಡಿಗರೇ ಇದ್ದೇವೆ. ಈ ಜಗಳವನ್ನು ಕನ್ನಡ, ಮರಾಠಿ ಜಗಳ ಮಾಡಲಾಗುತ್ತಿದೆ. ನಾವೂ ಸಹ ಕನ್ನಡಿಗರು. ಇದನ್ನು ಬೆಳೆಸಬೇಡಿ ಎಂದು ವೀಡಿಯೋದಲ್ಲಿ ಹೇಳಿಕೆ ನೀಡಿದ್ದಾರೆ.
ಘಟನೆ ಹಿನ್ನೆಲೆ:-
ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಮರಾಠಿ ಪುಂಡರು ಬೆಳಗಾವಿಯ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದರು. ಅಲ್ಲದೇ ಘಟನೆಗೆ ಸಂಬಂಧಿಸಿದಂತೆ ನಿರ್ವಾಹಕ ಮಹಾದೇವ ಹುಕ್ಕೇರಿ ವಿರುದ್ಧ ಪೋಕ್ಸೋ ಪ್ರಕರಣ ಕೂಡ ದಾಖಲಾಗಿತ್ತು.
ಕಂಡಕ್ಟರ್ ಮಹಾದೇವ ಅವರು ಬಸ್‌ನಲ್ಲೇ ಕೆಟ್ಟ ದೃಷ್ಟಿಯಿಂದ ನೋಡಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದಕ್ಕೆ ಕನ್ನಡಿಗರು ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಂತೆ ದೂರುದಾರೆ ಕಂಪ್ಲೆಂಟ್ ವಾಪಸ್ ತೆಗೆದುಕೊಂಡಿದ್ದಾರೆ.