ಬೆಂಗಳೂರು: ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಸ್ನೇಹಿತರಿಬ್ಬರನ್ನು ಹೆಚ್‌ಎಸ್‌ಆರ್ ಲೇಔಟ್‌ನ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ದಿನೇಶ್ ಹಾಗೂ ಕುಪ್ಪನ್ ಬಂಧಿತ ಆರೋಪಿಗಳಾಗಿದ್ದು, ದಿನೇಶ್ ಬಿಸಿಎ ಮುಗಿಸಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಹಾಗೂ ಕುಪ್ಪನ್ ಗಾರೆ ಕೆಲಸ ಮಾಡುತ್ತಿದ್ದ.
Advertisement
ಇಬ್ಬರು ಒಂದೇ ಊರಿನವರಾಗಿದ್ದು, ಚಿಕ್ಕಂದಿನಿಂದಲೂ ಫ್ರೆಂಡ್ಸ್ ಆಗಿದ್ದರು. ಸಿಲಿಕಾನ್ ಸಿಟಿಯಲ್ಲಿ ಜೀವನ ಸಾಗಿಸಲು ದುಡ್ಡು ಸಾಕಾಗದೇ ಗಾಂಜಾ ಮಾರಾಟಕ್ಕೆ ಇಳಿದಿದ್ದರು. ಕಾಲೇಜು ಒಂದರ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುವಾಗ ಹೆಚ್‌ಎಸ್‌ಆರ್ ಲೇಔಟ್‌ನ ಪೊಲೀಸರು ಬಂಧಿಸಿದ್ದು, ಇಬ್ಬರಿಂದ 13 ಲಕ್ಷ ರೂ. ಮೌಲ್ಯದ 23 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಇನ್ನೂ ಘಟನೆ ಸಂಭಂಧ ಪ್ರಕರಣ ದಾಖಲಾಗಿದೆ.