ವಿಜಯಪುರ:- ವಿಜಯಪುರ ಪೊಲೀಸರ ಕಾರ್ಯಾಚರಣೆ ನಡೆಸಿ, ಬೈಕ್, ಮನೆಗಳ್ಳತನ ಮಾಡುತ್ತಿದ್ದ ಇಬ್ಬರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 9 ಲಕ್ಷಕ್ಕೂ ಅಧಿಕ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಮೀರ ಇನಾಮದಾರ ಹಾಗೂ ಮೊಸೀನ ಕಲಾದಗಿ ಬಂಧಿತರು.
ನಗರದ ಸಿಂದಗಿ ನಾಕಾ ಬಳಿ ಮನೆಗಳ್ಳತನ ಮಾಡಿ, ಓಡಾಡುತ್ತಿದ್ದ ವೇಳೆ ಪರಿಶೀಲನೆ ಮಾಡುತ್ತಿದ್ದ ಪೊಲೀಸರು ಓರ್ವನನ್ನು ಬಂಧಿಸಿದ್ದು, ಮತ್ತೊಂದೆಡೆ ಬೈಕ್ ಕಳ್ಳತನ ಮಾಡುತ್ತಿದ್ದ ವೇಳೆ ಓರ್ವನನ್ನು ಬಂಧಿಸಿದ್ದಾರೆ.
ಮನೆಗಳ್ಳತನ ಮಾಡುತ್ತಿದ್ದ ಆರೋಪಿಯಿಂದ 7,59,600 ಲಕ್ಷ ರೂ. ಮೌಲ್ಯದ 100 ಗ್ರಾಂ ಚಿನ್ನ, 120 ಗ್ರಾಂ ಬೆಳ್ಳಿ ವಶಕ್ಕೆ ಪಡೆಯಲಾಗಿದೆ.
ಇನ್ನೂ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯಿಂದ 2,20,000 ಲಕ್ಷ ರೂ. ಮೌಲ್ಯದ 4 ವಿವಿಧ ಕಂಪನಿಯ ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಪ್ರಕರಣ ಸಂಬಂಧ ಗೋಳಗುಮ್ಮಟ ಹಾಗೂ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.