ಚಿಕ್ಕೋಡಿ:- ಕೈಯಲ್ಲಿ ತಲ್ವಾರ್ ಹಿಡಿದು ಪಬ್ಲಿಕ್ ನಲ್ಲಿ ಓಡಾಟ ನಡೆಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಾಟಾಬಳಿ(೨೫), ನಾಗರಾಜ ದ್ಯಾಮಪ್ಪ ಕಟಾಬಳಿ(೨೧) ಬಂಧಿತರು.
ಇವರು ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದ ಬಳಿ, ತಲ್ವಾರ್ ಕೈಯಲ್ಲಿ ಹಿಡಿದು ಓಡಾಡಿದ್ದರು. ಅಲ್ಲದೇ ಜನರನ್ನ ನಿಂದಿಸಿ, ಭಯದ ವಾತಾವರಣ ನಿರ್ಮಾಣ ಮಾಡಿದ್ದರು.
ವಿಷಯ ತಿಳಿದ ಯಮಕನಮರಡಿ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆಯ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



