ಬೆಂಗಳೂರು:- ಕರ್ನಾಟಕದ ಇಬ್ಬರು ಬಿಜೆಪಿ ಮುಖಂಡರಾದ ಅಪ್ಪ-ಮಗನನ್ನು ಆಂಧ್ರದಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ.
ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದವರನ್ನು ಮಹದೇವಪುರ ಬಿಜೆಪಿ ಯುವ ಮುಖಂಡ ಮತ್ತು ಉದ್ಯಮಿ ಪ್ರಶಾಂತರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಎಂದು ಗುರುತಿಸಲಾಗಿದೆ.
ಉದ್ಯಮಿಗಳಾಗಿವೂ ಗುರುತಿಸಿಕೊಂಡಿದ್ದ ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ವೀರಸ್ವಾಮಿ ರೆಡ್ಡಿ ಹಾಗೂ ಪ್ರಶಾಂತ ರೆಡ್ಡಿ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸ್ ವಿಚಾರಣೆಗೆ ಆಂಧ್ರ ಪ್ರದೇಶ ರಾಜ್ಯಕ್ಕೆ ತೆರಳಿದ್ದರು. ಈ ವೇಳೆ ಇಬ್ಬರನ್ನೂ ಅಪಹರಣ ಮಾಡಿ ಕೊಲೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.