ಬೆಳಗಾವಿ:- ಹಳ್ಳದಲ್ಲಿ ಎತ್ತಿನ ಗಾಡಿ ಮಗುಚಿ ಬಿದ್ದು ಇಬ್ಬರು ಮಕ್ಕಳು ಮತ್ತು ಒಂದು ಎತ್ತು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರ ಪಿಎ ಗ್ರಾಮದಲ್ಲಿ ಜರುಗಿದೆ. 9 ವರ್ಷದ ಗಣೇಶ್ ಕಾಂಬಳೆ, 11 ವರ್ಷದ ದೀಪಕ್ ಕಾಂಬಳೆ ಮೃತರು.
Advertisement
ಭಾರಿ ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿದೆ. ಹಳ್ಳಕ್ಕೆ ಸೇತುವೆ ಇಲ್ಲದಿರುವುದರಿಂದ, ಸಂಬರಗಿ ಗ್ರಾಮದಿಂದ ನಾಗನೂರ ಪಿಎ ಗ್ರಾಮಕ್ಕೆ ಹರಿಯುತ್ತಿರುವ ನೀರಿನಲ್ಲೇ ಎತ್ತಿನ ಗಾಡಿಯಲ್ಲಿ ಈ ಇಬ್ಬರು ಮಕ್ಕಳು ತೆರಳಿದ್ದಾರೆ. ಸುತ್ತಲೂ ನೀರು ಇದ್ದಿದ್ದರಿಂದ ದಾರಿ ಕಂಡಿಲ್ಲ. ನೀರಿನ ರಭಸಕ್ಕೆ ಎತ್ತಿನ ಗಾಡಿ ಮಗುಚಿ ಬಿದ್ದಿದೆ. ಪರಿಣಾಮ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.