ಚಿಕ್ಕಬಳ್ಳಾಪುರ:- ಜಿಲ್ಲೆಯ ಚೇಳೂರು ತಾಲೂಕಿನ ಕುರಪ್ಪಲ್ಲಿ ಗ್ರಾಮದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಕೃಷಿಹೊಂಡದಲ್ಲಿ ಕಾಲು ಜಾರಿಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜರುಗಿದೆ.
17 ವರ್ಷದ ರಾಧಾ, 14 ವರ್ಷದ ಸಾಹಿತಿ ಮೃತ ಮಕ್ಕಳು. ಬೇಸಿಗೆ ರಜೆ ಇದ್ದ ಕಾರಣ ತಾಯಿಯ ಜೊತೆ ತೋಟದಲ್ಲಿ ಕೆಲಸ ಮಾಡುವಾಗ ಕೃಷಿ ಹೊಂಡಕ್ಕೆ ಆಳವಡಿಸಿದ್ದ ಪೈಪ್ ಸರಿ ಮಾಡಲು ಹೋಗಿ ಅಕ್ಕ ತಂಗಿ ಇಬ್ಬರು ಕಾಲು ಜಾರಿ ಬಿದ್ದಿದ್ದಾರೆ.
ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲುಮುಟ್ಟಿದೆ. ಚೇಳೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



