ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ನಲ್ಲಿಕಟ್ಟೆ ಗ್ರಾಮದ ಅಜ್ಜಪ್ಪ ಎಂಬುವರ ಜಮೀನಲ್ಲಿ ನಡೆದಿದೆ. ಗ್ರಾಮದ ನಾಗರಾಜ (35) ಶ್ರೀನಿವಾಸ (48) ಮೃತ ರೈತರಾಗಿದ್ದು,
Advertisement
ತೋಟದಲ್ಲಿ ತೆಂಗಿನ ಕಾಯಿ ಕೀಳಲು ತೆರಳಿದ್ದಾಗ ಈಜಲು ಹೋಗಿ ಈ ದುರ್ಘಟನೆ ಸಂಭವಿಸಿದೆ. 12 ಅಡಿ ಆಳದ ಕೃಷಿ ಹೊಂಡದಲ್ಲಿ ಮುಳುಗಿ ಉಸಿರುಕಟ್ಟಿ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸ್ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ಇಬ್ಬರು ರೈತರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.