ನವದೆಹಲಿ:– ಸ್ವಿಮ್ಮಿಂಗ್ ಕ್ಲಾಸ್ ಗೆ ಹೋಗಿದ್ದ ಇಬ್ಬರು ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯ ನರೇಲಾದಲ್ಲಿ ಜರುಗಿದೆ.
ಆಗಸ್ಟ್ 8ರಂದು ಬಾಲಕಿಯ ತಾಯಿ ನರೇಲಾ ಪೊಲೀಸ್ ಠಾಣೆಗೆ ಬಂದು ಈಜು ತರಗತಿಗೆ ತೆರಳಿದ್ದ ವೇಳೆ ತನ್ನ ಮಗಳು ಮತ್ತು ಇನ್ನೊಬ್ಬ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಬಿಹಾರದ ಸಮಷ್ಟಿಪುರ ಜಿಲ್ಲೆಯ ನಿವಾಸಿ ಅನಿಲ್ ಕುಮಾರ್ (37) ಮತ್ತು ಉತ್ತರ ಪ್ರದೇಶದ ಅಜಂಗಢ ಜಿಲ್ಲೆಯ ಮುನಿಲ್ ಕುಮಾರ್ (24) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ತನಿಖೆಯ ಸಮಯದಲ್ಲಿ, ಪೊಲೀಸರು ಆರೋಪಿಯ ಸೂಚನೆಯ ಮೇರೆಗೆ ದಿಂಬಿನ ಕವರ್, ಬೆಡ್‌ಶೀಟ್ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್ (ಡಿವಿಆರ್) ಸೇರಿದಂತೆ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಇಬ್ಬರೂ ಆರೋಪಿಗಳ ಮೇಲೆ ಯಾವುದೇ ಕ್ರಿಮಿನಲ್ ದಾಖಲೆಗಳಿಲ್ಲ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.



