ಮೈಸೂರು:- ರಸ್ತೆ ಅಪಘಾತವಾಗಿ ಬಿದ್ದಿದ್ದವನ ಮೊಬೈಲ್‌ನಿಂದ 80 ಸಾವಿರ ದೋಚಿದ್ದ ಖದೀಮರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರಮೇಶ್ ಮತ್ತು ಮನು ಬಂಧಿತರು. ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಗಣೇಶ್ ಎಂಬ ವ್ಯಕ್ತಿ ಡಿಸೆಂಬರ್ 19ರಂದು ಮೈಸೂರು ತಾಲ್ಲೂಕಿನ ಕಡಕೊಳದ ಬಳಿ ಅಪಘಾತಕ್ಕೆ ಒಳಗಾದರು. ಅವರನ್ನು ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ರಮೇಶ್ ಮತ್ತು ಮನು ಎಂಬ ಇಬ್ಬರು ವ್ಯಕ್ತಿಗಳು ಗಣೇಶನ ಮೊಬೈಲ್ ವಶಕ್ಕೆ ಪಡೆದು ಯುಪಿಐ ಮೂಲಕ 80,000 ರೂ. ವರ್ಗಾವಣೆ ಮಾಡಿ ಪರಾರಿಯಾಗಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ತಿಳಿದ ಮೇಲೆ ಗಣೇಶ್ ಅವರ ಸಹೋದರ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದರು. ಪೊಲೀಸರು ಪರಿಶೀಲನೆ ನಡೆಸಿ, ಮೈಸೂರಿನ ಮಹದೇವಪುರ ನಿವಾಸಿಗಳಾದ ರಮೇಶ್ ಮತ್ತು ಮನು ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದರು. ಬಂಧಿತರಿಂದ 80,000 ರೂ. ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.



