ಬೆಂಗಳೂರು:- ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನು ರಾತ್ರೋ ರಾತ್ರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಖದೀಮರನ್ನು ಆರ್ ಆರ್ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ತಮಿಳುನಾಡು ಮೂಲದ ಜಯಚಂದ್ರನ್ ಹಾಗೂ ಮಣಿಕಂದನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 16 ಲಕ್ಷ ಮೌಲ್ಯದ 18 ದ್ವಿಚಕ್ರ ವಾಹನ ಸೀಜ್ ಮಾಡಲಾಗಿದೆ.
ಆರೋಪಿಗಳು, ವಾಹನ ಕಳವು ಮಾಡಲಿಕ್ಕೆ ನಗರದಲ್ಲಿ ಬಾಡಿಗೆ ಮನೆ ಮಾಡ್ಕೊಂಡಿದ್ದರು. ರಾತ್ರಿ ವೇಳೆ ಬರುವ ಇವರು, ಮನೆಮುಂದೆ ನಿಲ್ಲಿಸಿದ್ದ ಬೈಕ್ ಲಾಕ್ ಮುರಿದು ವಾಹನ ಕಳವು ಮಾಡುತ್ತಿದ್ದರು. ಕದ್ದ ಬೈಕ್ ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಿ ಶೋಕಿ ಜೀವನ ಮಾಡುತ್ತಿದ್ದರು. ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಇಬ್ಬರು ಖದೀಮರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳು, ನಗರದ ಬ್ಯಾಟರಾಯನಪುರ, ಕೆಂಗೇರಿ, ಕಲಾಸಿಪಾಳ್ಯ, ಬೇಗೂರು, ಬಿಡದಿ, ಸಾತನೂರು, ಶ್ರೀರಂಗಪಟ್ಟಣ ಠಾಣೆ ವ್ಯಾಪ್ತಿಯ 18 ವಾಹನ ಕಳವು ಮಾಡಿರೋದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿಗಳ ವಿರುದ್ಧ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.