ಸಿಲಿಂಡರ್ ಸ್ಫೋಟದಲ್ಲಿ ಇಬ್ಬರು ಸಾವು: ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಂತೋಷ್ ಲಾಡ್

0
Spread the love

ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡ‌ರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಇನ್ನೂ ಕಿಮ್ಸ್ ಆಸ್ಪತ್ರೆಯ ಶವಗಾರಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಸಿಲೆಂಡರ್ ಸ್ಫೋಟದಲ್ಲಿ ಮೃತ ಪಟ್ಟವರಿಗೆ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

Advertisement

ಸಿಲಿಂಡರ್ ಸ್ಫೋಟದಲ್ಲಿ ನಿಜಲಿಂಗಪ್ಪ, ಸಂಜಯ ನಿಧನ ಹೊಂದಿದ್ದಾರೆ ಈಗ ಏನು ಮಾತನಾಡಬೇಕು ಅಂತ ತೋಚುತ್ತಿಲ್ಲ. ಸರ್ಕಾರ, ಜಿಲ್ಲಾಡಳಿತ, ಕಿಮ್ಸ್ ಅವರ ಬದುಕಿಸಲು ಪ್ರಯತ್ನ ಮಾಡಿದ್ವಿ. ನಾಲ್ವರು ಎಕ್ಸ್ಪೆರ್ಟ್ ವೈದ್ಯರನ್ನ ಕರೆಯಿಸಿ ಬದುಕಿಸಲು ಸಕಲ ಪ್ರಯತ್ನ ಮಾಡಲಾಗಿತ್ತು. ಆದಾಗ್ಯೂ, ತೀವ್ರವಾಗಿ ಸುಟ್ಟಿದ್ದರಿಂದ ಚಿಕಿತ್ಸೆ ಫಲಕಾರಿ ಆಗದೆ ಇಬ್ಬರು ಮೃತಪಟ್ಟಿದ್ದಾರೆ.

ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಜೊತೆಗೆ ನಷ್ಟ ಎಸುರಿಸುವ ಶಕ್ತಿ ಆ ಕುಟುಂಬಕ್ಕೆ ನೀಡಲಿ. ಮುಖ್ಯಮಂತ್ರಿಗಳು ಸಹ ಆ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಸರ್ಕಾರದಿಂದ 5  ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here