ಇಬ್ಬರು ಅಪ್ರಾಪ್ತೆಯರನ್ನು ಕಿಡ್ನ್ಯಾಪ್ ಮಾಡಿ ಗ್ಯಾಂಗ್ ರೇಪ್! ನಾಲ್ವರು ಕಾಮುಕರು ಅರೆಸ್ಟ್!

0
Spread the love

ಭುವನೇಶ್ವರ:- ಇಬ್ಬರು ಅಪ್ರಾಪ್ತೆಯರನ್ನು ಕಿಡ್ನ್ಯಾಪ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿದ ನಾಲ್ವರು ಕಾಮುಕರನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಗಂಜಾಂನಲ್ಲಿ ಜರುಗಿದೆ. ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ 14 ಮತ್ತು 15 ವರ್ಷ ಇಬ್ಬರು ಹುಡುಗಿಯರನ್ನು ಅಪಹರಿಸಿ ಬಳಿಕ ಕಾಮುಕರು ಈ ಕೃತ್ಯ ಎಸಗಿ ಎಸ್ಕೇಪ್ ಆಗಲು ಯತ್ನಿಸಿದ್ದರು. ಆದರೆ ಪೊಲೀಸರು ಅವರನ್ನು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಜೂನ್‌ 3ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement

ಇಬ್ಬರು ಹೆಣ್ಣುಮಕ್ಕಳು ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನಿರ್ಜನ ಪ್ರದೇಶಕ್ಕೆ ಇಬ್ಬರನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ, ಜೊತೆಗೆ ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹುಡುಗಿಯರಿಗೆ ಮೊದಲು ಇಬ್ಬರು ಪುರುಷರು ಆಮಿಷವೊಡ್ಡಿದ್ದಾರೆ, ಈ ಪೈಕಿ ಒಬ್ಬ ಆರೋಪಿ ಸಂತ್ರಸ್ತೆಗೆ ಪರಿಚಯವಿದ್ದ. ಅವರೊಂದಿಗೆ ಇನ್ನಿಬ್ಬರು ಸೇರಿಕೊಂಡು ಅಪಹರಿಸಿದ ಬಳಿಕ ಕೃತ್ಯ ಎಸಗಿದ್ದಾರೆ ಅನ್ನೋದು ತಿಳಿದುಬಂದಿದೆ.

ಬಳಿಕ ವಿಷಯ ತಿಳಿದ ಪೋಷಕರು ಜೂನ್ 4 ರಂದು ದೂರು ದಾಖಲಿಸಿದ್ದು, ಅದರನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here