ಚಿತ್ರದುರ್ಗ ಮೂಲಕ ಮೃತ ರೇಣುಕಾಸ್ವಾಮಿಗೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಿಗಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದರು. ಇದಕ್ಕೆ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿ ರಮ್ಯಾರನ್ನು ತೀವ್ರವಾಗಿ ಟೀಕಿಸಿದ್ದರು. ಅಲ್ಲದೆ ಅಶ್ಲೀಲ ಮೆಸೇಜ್ ಮಾಡಿದ್ದರು. ಈ ಬಗ್ಗೆ ನಟಿ ನೀಡಿದ ದೂರಿನ ಅನ್ವಯ ಇದೀಗ ನಾಲ್ಕು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.
ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಗಳಿಂದ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್, ಈ ಹಿಂದೆ ಇಬ್ಬರನ್ನು ಬಂಧಿಸಲಾಗಿದ್ದು ಇದೀಗ ಮತ್ತಿಬ್ಬರನ್ನು ಅರೆಸ್ಟ್ ಮಾಡಲಾಗಿದೆ. ಒಟ್ಟು ಒಟ್ಟು ನಾಲ್ಕು ಮಂದಿ ಬಂಧನ ಮಾಡಲಾಗಿದೆ. ಅಶ್ಲೀಲ ಕಾಮೆಂಟ್ ಮಾಡಿದ ಬಗ್ಗೆ ಇನ್ನೂ ಕೂಡ ತನಿಖೆ ನಡೆಯುತ್ತಿದ್ದು, ಕೆಲವರ ವಿಚಾರಣೆ ಕೂಡ ನಡೆಸಲಾಗುತ್ತಿದೆ ಎಂದಿದ್ದಾರೆ.
ರಮ್ಯಾ ನೀಡಿದ ದೂರಿನ ಅನ್ವಯ ನಾಲ್ಕು ಜನರ ಬಂಧನವಾಗಿದ್ದು ಅಶ್ಲೀಲವಾಗಿ ಸಂದೇಶ ಕಳಿಸಿದ್ದು, ಪೋಟೊ ಅಪ್ಲೋಡ್ ಮಾಡ್ತಿದ್ದ ಪ್ರಮುಖ ಆರೋಪಿ ಅರೆಸ್ಟ್ ಆಗಿದ್ದಾರೆ. ಇನ್ನು ಹಲವರ ಪತ್ತೆ ಮಾಡುತ್ತೀದ್ದೇವೆ ಎಂದು ಹೇಳಿದ್ದಾರೆ.
ರಮ್ಯಾ ನೀಡಿದ ದೂರಿನ ಮೇರೆಗೆ ಹನ್ನೊಂದು ಮಂದಿಯನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗಿತ್ತು. ನಟಿ ರಮ್ಯಾ ಅವರು 43 ಐಡಿಗಳ ಜೊತೆಗೆ ಮತ್ತೆ ಐದು ಐಡಿಗಳನ್ನು ಪೊಲೀಸರಿಗೆ ನೀಡಿದ್ದಾರೆ. 48 ಐಡಿಗಳ ಐಪಿ ಅಡ್ರೆಸ್ ಗಳನ್ನು ನೀಡುವಂತೆ ಇನ್ಸ್ಟಾಗ್ರಾಂ ಗೆ ಪತ್ರ ಕೂಡಾ ಬರೆಯಲಾಗಿತ್ತು. ಸಿಸಿಬಿ ಸೈಬರ್ ಕ್ರೈಮ್ ಪೊಲೀಸರು ಪತ್ರ ಬರೆದು ಮೂರು ದಿನಗಳಾಗಿದ್ದು ಇನ್ನೆರಡು ದಿನದಲ್ಲಿ ಉತ್ತರ ಬರೋ ಸಾಧ್ಯತೆ ಇದೆ ಎನ್ನಲಾಗಿದೆ.