ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚನ್ನಗಿರಿ ತಾಲೂಕಿನ ಗುಳ್ಳೇಹಳ್ಳಿ ಬಳಿ ನಡೆದಿದೆ. ಅರ್ಜುನ್ ನಾಯ್ಕ (25), ಹರೀಶ್ ನಾಯ್ಕ (30) ಮೃತ ದುರ್ದೈವಿಗಳಾಗಿದ್ದು,
Advertisement
ಮೃತರು ಚಿಕ್ಕಮಗಳೂರಿನ ಕೊಟ್ಟಿಗೆಹಾಳದಿಂದ ದಾವಣಗೆರೆ ಕಡೆ ಹೊರಟಿದ್ದರು. ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಚಾಲಕನಿಗೆ ಹುಡುಕಾಟ ನಡೆದಿದೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


