ದೊಡ್ಡಬಳ್ಳಾಪುರ: ರಸ್ತೆ ಬದಿಯ ಕಲ್ಲಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಸೊಣ್ಣಮಾರನಹಳ್ಳಿ ಬಳಿ ನಡೆದಿದೆ. ಕೊನಘಟ್ಟ ಮೂಲದ ಮಣಿಕುಮಾರ್ (30) ಮೃತ ದುರ್ದೈವಿಯಾಗಿದ್ದು,
Advertisement
ರಸ್ತೆ ತಿರುವಿನಲ್ಲಿ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.ಮೃತನ ಶವವನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.