Accident: ಕಿಲ್ಲರ್ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಮಹಿಳೆಯರು ಬಲಿ.!

0
Spread the love

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ ಘಟನೆ ಥಣಿಸಂದ್ರ ಮುಖ್ಯ ರಸ್ತೆಯಲ್ಲಿ ನಡೆದಿದೆ. ನಾಜಿಯಾ ಸುಲ್ತಾನ್ ಹಾಗೂ ನಾಜಿಯಾ ಇರ್ಫಾನ್ ಮೃತ ದುರ್ಧೈವಿಗಳಾಗಿದ್ದು, ಥಣಿಸಂದ್ರ ಮುಖ್ಯ ರಸ್ತೆಯ ಸರಾಯಿಪಾಳ್ಯದ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು.

Advertisement

ಈ ವೇಳೆ ಬಿಬಿಎಂಪಿಯ ಕಸದ ಲಾರಿಯನ್ನು ಎಡಗಡೆಯಿಂದ ಓವರ್​ಟೇಕ ಮಾಡಲು ಹೋಗಿದ್ದಾರೆ. ಆದರೆ ಈ ವೇಳೆ ಮತ್ತೊಂದು ಬೈಕ್ ಅಡ್ಡಬಂದಿದ್ದು. ಆ ಅಪಘಾತವನ್ನು ತಪ್ಪಿಸಿಕೊಳ್ಳುವ ಭರದಲ್ಲಿ ಬಲಕ್ಕೆ ತಿರುವು ಪಡೆದಿದ್ದಾರೆ.

ಈ ವೇಳೆ ಲಾರಿ ಡಿಕ್ಕಿಯಾಗಿದ್ದು. ಇಬ್ಬರು ಮಹಿಳೆಯರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇಬ್ಬರು ಮಹಿಳೆಯರ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು. ಹೆಣ್ಣೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.


Spread the love

LEAVE A REPLY

Please enter your comment!
Please enter your name here