ಹಾಸನ:- ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದ ಹೇಮಾವತಿ ನದಿಯಲ್ಲಿ ಜರುಗಿದೆ.
29 ವರ್ಷದ ಪ್ರಕಾಶ್, 27 ವರ್ಷದ ಭರತ್ ಮೃತ ಯುವಕರು. ಮೃತರಲ್ಲಿ ಪ್ರಕಾಶ್, ಸಕಲೇಶಪುರ ತಾಲೂಕಿನ ಕಾಟಳ್ಳಿ ಗ್ರಾಮದ ನಿವಾಸಿಯಾಗಿದ್ದು, ಮತ್ತೋರ್ವ ಭರತ್, ಚಿಕ್ಕಮಗಳೂರು ಜಿಲ್ಲೆಯ ಹಾಂದಿ ಗ್ರಾಮದವನು ಎಂದು ತಿಳಿದು ಬಂದಿದೆ.
ಸದ್ಯ ಸ್ಥಳೀಯರ ನೆರವಿನಿಂದ ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಶವಗಳನ್ನು ಹೊರತೆಗೆದಿದ್ದಾರೆ. ಸಕಲೇಶಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



