ಕಾಲು ಜಾರಿ ಬಾವಿಗೆ ಬಿದ್ದ ಇಬ್ಬರು ಯುವತಿಯರು ಸಾವು!

0
Spread the love

ಯಾದಗಿರಿ:- ಬಟ್ಟೆ ತೊಳೆಯಲು ಹೋದ ಇಬ್ಬರು ಯುವತಿಯರು ಕಾಲು ಜಾರಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರ ಭಾಗದಲ್ಲಿ ಜರುಗಿದೆ. 17 ವರ್ಷದ ವೈಶಾಲಿ, 16 ವರ್ಷದ ನವೀತಾ ಮೃತರು.

Advertisement

ಇಬ್ಬರು ಬಟ್ಟೆ ತೊಳೆಯಲು ಹೋದಾಗ ಈ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಸ್ಥಳೀಯರು ಶವವನ್ನು ಬಾವಿಯಿಂದ ಹೊರಗೆ ತೆಗೆದಿದ್ದಾರೆ. ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

LEAVE A REPLY

Please enter your comment!
Please enter your name here