ಶಿವಮೊಗ್ಗ:- ಕೈದಿ ಭೇಟಿಯಾಗಲು ಗಾಂಜಾ ತಂದಿದ್ದ ಇಬ್ಬರು ಜೈಲಿನಲ್ಲೇ ಲಾಕ್ ಆಗಿರುವ ಘಟನೆ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಜರುಗಿದೆ.
ಬಂಧಿತರನ್ನ ಮಹಮ್ಮದ್ ಅಕ್ಬರ್ ಅಲಿಯಾಸ್ ಕಣ್ಣಪ್ಪ (22), ಮದರಿ ಪಾಳ್ಯ ಅಲಿಯಾಸ್ ಅಜ್ಗರ್ ಅಲಿ ಅಲಿಯಾಸ್ ಅಜ್ಜು (21) ಎಂದು ಗುರುತಿಸಲಾಗಿದೆ.
ಜ.5ರ ಸಂಜೆ ಕೇಂದ್ರ ಕಾರಾಗೃಹದಲ್ಲಿ ಕೈದಿಯನ್ನು ಭೇಟಿಯಾಗಲು ಈ ಇಬ್ಬರು ಆಗಮಿಸಿದ್ದರು. ಈ ವೇಳೆ ಜೈಲು ಅಧಿಕಾರಿಗಳು ರೂಢಿಯಂತೆ ತಪಾಸಣೆ ನಡೆಸಿದಾಗ, ಅವರ ಪ್ಯಾಂಟ್ ಒಳಗಡೆ ಗಾಂಜಾ ಇಟ್ಟುಕೊಂಡಿರುವುದು ಪತ್ತೆಯಾಗಿದೆ. ಕೂಡಲೇ ಜೈಲು ಅಧಿಕಾರಿಗಳು ತುಂಗಾನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರಿಂದ ಪತ್ತೆಯಾದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



