ಮಂಗಳೂರು:- ಇಲ್ಲಿನ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿಯಲ್ಲಿ ಇಬ್ಬರು ಯುವಕರ ಮೇಲೆ ತಲ್ವಾರ್‌ನಿಂದ ದಾಳಿ ನಡೆಸಲಾಗಿದ್ದು, ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತೊಬ್ಬ ಗಾಯಗೊಂಡಿದ್ದಾನೆ.
ಕೊಲೆಯಾದ ಯುವಕನನ್ನು ಅಬ್ದುಲ್ ರಹೀಂ ಎಂದು ಗುರುತಿಸಲಾಗಿದೆ. ಕಲಂದರ್‌ಗೆ ಗಂಭೀರವಾಗಿ ಗಾಯವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿಯಲ್ಲಿ ಘಟನೆ ನಡೆದಿದೆ.
ಅಬ್ದುಲ್ ಇರಾಕೋಡಿ ಎಂಬಲ್ಲಿ ಮರಳು ಅನ್‌ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್‌ನಿಂದ ದಾಳಿ ನಡೆಸಿದ್ದಾರೆ. ಜೊತೆಗಿದ್ದ ಕಲಂದರ್ ಎಂಬಾತನ ಮೇಲೂ ದಾಳಿ ನಡೆಸಲಾಗಿದೆ. ಪರಿಣಾಮ ಅಬ್ದುಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದು, ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದ್ವೇಷ ಭಾಷಣದ ಕಾರಣದಿಂದಲೇ ಕೊಲೆ ಆಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ದ್ವೇಷ ಭಾಷಣ ಮಾಡೋರನ್ನ ಬಂಧಿಸಿದ್ದರೆ ಕೊಲೆ ಆಗ್ತಾ ಇರಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಹಿಂದೂ ಮುಖಂಡರ ಬಂಧನಕ್ಕೆ ಆಗ್ರಹಿಸಿದ್ದಾರೆ.