ಬೆಂಗಳೂರು:- ಇಬ್ಬರು ಯುವಕರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ನಲ್ಲಿ ಜರುಗಿದೆ. ಡ್ರಗ್ಸ್ ಓವರ್ ಡೋಸ್‌ನಿಂದ ಮೃತಪಟ್ಟಿರುವ ಅನುಮಾನ ವ್ಯಕ್ತವಾಗಿದೆ.
Advertisement
ಅಸ್ಸಾಂ ಮೂಲದ ದಿವಾನ್ ಅಫ್ರೀದಿ ಅಲಿ ಹಾಗೂ ಅಶ್ರಫ್ ಅಲಿ ಮೃತರು.ಯಾರಂಡಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಇಬ್ಬರು ವಾಸವಿದ್ದರು. ಇಬ್ಬರು ಸಿರಿಂಜ್ ಮೂಲಕ ಡ್ರಗ್ಸ್ ಇಂಜೆಕ್ಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಓರ್ವ ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಅಡಿಷನಲ್ ಎಸ್‍ಪಿ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.