ಬೆಂಗಳೂರು:- ಮಾಗಡಿ ರಸ್ತೆಯ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ದಾರುಣ ಸಾವಿಗೀಡಾಗಿರುವ ಘಟನೆ ಜರುಗಿದೆ.
Advertisement
ಬಿನ್ನಿಪೇಟೆ, ಕೆ.ಪಿ ಅಗ್ರಹಾರದ ನಿವಾಸಿಗಳಾದ ಸೂರ್ಯ, ಶರತ್ ಮೃತರು ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ 10:30ರ ಸುಮಾರಿಗೆ ದುರ್ಘಟನೆ ಸಂಭವಿಸಿದೆ.
ಬಿನ್ನಿಪೇಟೆಯ ಸೂರ್ಯ ಮತ್ತು ಶರತ್ ಎಂಬಾತ ಕೆಪಿ ಅಗ್ರಹಾರದವ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿಗೆ ಸಿಲುಕಿ ದುರ್ಮರಣಕ್ಕೀಡಾಗಿದ್ದಾರೆ. ಘಟನೆ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರು ಯುವಕರು ರೈಲ್ವೆ ಟ್ರ್ಯಾಕ್ ಮೇಲೆ ಕೂತಿರುವಾಗ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರ ಕಾಲುಗಳು ಮುರಿದಿದೆ. ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.