ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬೆಳಗಲಿ ಗ್ರಾಮದ ಬಳಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.
ಗಂಡಸಿ ಹೋಬಳಿಯ ಕಾಲೇನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರದೀಪ್ (22) ಮತ್ತು ಅರುಣ್ (21) ಮೃತ ದುರ್ದೈವಿಗಳಾಗಿದ್ದಾರೆ.
ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೈಕ್‌ನಲ್ಲಿ ತಮ್ಮ ಗ್ರಾಮಕ್ಕೆ ಮರಳುತ್ತಿದ್ದ ವೇಳೆ ಸೇತುವೆ ಸಮೀಪ ಅಪರಿಚಿತ ವಾಹನ ಅವರ ಬೈಕ್‌ಗೆ ವೇಗವಾಗಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಘಟನೆ ಬಳಿಕ ವಾಹನ ಚಾಲಕ ಯಾವುದೇ ನೆರವು ನೀಡದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಹೀಗಾಗಿ ಪ್ರಕರಣ ಹಿಟ್ ಅಂಡ್ ರನ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಈ ಸಂಬಂಧ ನುಗ್ಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.



