ಮೈಸೂರು:- ಮೈಸೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಉದಯಗಿರಿ ಪೊಲೀಸ್ ಠಾಣೆ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಮೌಲ್ವಿಗೆ 14 ದಿನಗಳು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Advertisement
2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೌಲ್ವಿ ಮುಫ್ತಿ ಮುಸ್ತಾಕ್ ಮಕ್ಬೋಲಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಆರೋಪಿಯನ್ನು ಸಿಸಿಬಿ ಪೊಲೀಸರು ಮೈಸೂರು ಜೈಲಿನತ್ತ ಕರೆದೊಯ್ದಿದ್ದಾರೆ.
ಘಟನೆ ಹಿನ್ನೆಲೆ:-
ಫೆ. 10ರಂದು ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು. ಇದಕ್ಕೂ ಮುನ್ನ ಆರೋಪಿ ಮೌಲ್ವಿ ಮುಫ್ತಿ ಮಕ್ಬೋಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವೀಡಿಯೋ ವೈರಲ್ ಆಗಿತ್ತು. ಪ್ರಕರಣ ನಡೆದ 11 ದಿನಗಳ ಬಳಿಕ ಆರೋಪಿ ಮೌಲ್ವಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.