ಉಡುಪಿ: ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದರಿಂದ ಶಿಕ್ಷಕರು, ಪೋಷಕರು, ಮಕ್ಕಳು ಆತಂಕಕ್ಕೆ ಒಳಗಾದ ಪರಿಸ್ಥಿತಿಯೂ ನಿರ್ಮಾಣವಾಗಿತ್ತು. ಪರಿಶೀಲನೆ ವೇಳೆ ಅವೆಲ್ಲ ಹುಸಿ ಬಾಂಬ್ ಕರೆ ಎನ್ನುವುದು ಸಾಬೀತಾಗಿತ್ತು. ಇದೀಗ ಉಡುಪಿಯ ಪ್ರತಿಷ್ಠಿತ ಶಾರದಾ ವಸತಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ.
Advertisement
ಇದರಿಂದ ಉಡುಪಿ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮೇಲ್ ಸಂದೇಶ ಕಂಡು ಶಾಲೆಯ ಸಿಬ್ಬಂದಿ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೆ ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಶಾಲೆಯ ಮೂಲೆ ಮೂಲೆಯಲ್ಲೂ ಹುಡುಕಾಟ ನಡೆಸಿದ್ದಾರೆ. ಇನ್ನು, ಬಾಂಬ್ ಬೆದರಿಕೆ ಸಂದೇಶ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಶಾಲೆಯ ಮುಂಭಾಗ ಜಮಾಯಿಸಿದ್ದಾರೆ.