ಉಡುಪಿ:- ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಖತರ್ನಾಕ್ ಲೇಡಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರೀನಾ ಜೊಶಿಲ್ಡ ಬಂಧಿತ ಲೇಡಿ.
Advertisement
ಗುಜರಾತ್ನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಂಜಿನಿಯರಿಂಗ್ ಅಧ್ಯಯನ ಮಾಡಿ ಚೆನ್ನೈಯಲ್ಲಿ ಎಂಜಿನಿಯರ್ ಆಗಿದ್ದ ರೀನಾ ಜೊಶಿಲ್ಡ, ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಳು.
ಆರೋಪಿ ರೀನಾ ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಿದ್ದಳು. ಹೀಗಾಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಸದ್ಯ, ಗುಜರಾತಿನ ಅಹಮದಾಬಾದ್ ಪೊಲೀಸರಿಂದ ಆರೋಪಿ ರೀನಾ ಜೋಶಿಲ್ಡ ವಿಚಾರಣೆ ನಡೆಯುತ್ತಿದೆ. ಆಕೆಯನ್ನು ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಡಿ ನೀಡಲು ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ.