ಬೆಂಗಳೂರು: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ.
ಬೆಂಗಳೂರಿನಲ್ಲಿ ಹಬ್ಬದ ಖರೀದಿ ಜೋರಾಗಿ ನಡೆಯುತ್ತಿದೆ. ಕೆಆರ್ ಮಾರುಕಟ್ಟೆಯಲ್ಲಿ ಕಿಕ್ಕಿರಿದು ಜನ ತುಂಬಿದ್ದಾರೆ. ಹೂವು,ಹಣ್ಣು, ಮಾವಿನ ಸೊಪ್ಪು, ಬೇವಿನಸೊಪ್ಪು ಖರೀದಿಸಲು ಜನರು ಮುಗಿಬಿದ್ದಿದ್ದಾರೆ. ಮಧ್ಯರಾತ್ರಿಯಿಂದಲೇ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಆರಂಭಗೊಂಡಿದೆ.
ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗರು ಆಗಮಿಸಿ ಹೂವು, ಹಣ್ಣು, ಮಾವಿನ ಸೊಪ್ಪು, ಬೇವಿನ ಸೊಪ್ಪು ಖರೀದಿಸಲು ಮುಗಿಬಿದ್ದಿದ್ದಾರೆ. ಹಬ್ಬದ ಪ್ರಯುಕ್ತ ಹೂವಿಗೆ ಬೇಡಿಕೆ ಹೆಚ್ಚಾಗಿದೆ. ಕನಕಾಂಬರ, ಮಲ್ಲಿಗೆ, ಗುಲಾಬಿ, ಸುಗಂಧರಾಜ, ಸೇವಂತಿಗೆ ಸೇರಿದಂತೆ ಹೂವಿನ ದರಗಳು ಏರಿಕೆಯಾಗಿವೆ.
ಹೂವು ದರಗಳು:
- ಮಲ್ಲಿಗೆ: 1,500–1,800 ರೂ.
- ಮಲ್ಲಿಗೆ ಹಾರ: 300–500 ರೂ.
- ಸೇವಂತಿಗೆ: 200–250 ರೂ.
- ಗುಲಾಬಿ: 250 ರೂ.
- ಚೆಂಡು ಹೂ: 40–50 ರೂ.
ಸೊಪ್ಪು ದರಗಳು:
- ಒಂದು ಕಟ್ಟು ಬೇವಿನ ಸೊಪ್ಪು: 20 ರೂ.
- ಒಂದು ಕಟ್ಟು ಮಾವಿನ ಸೊಪ್ಪು: 25 ರೂ.
ಯುಗಾದಿ ಎರಡು ದಿನಗಳ ಹಬ್ಬ. ಮೊದಲ ದಿನ ಸಿಹಿ ಖಾದ್ಯಗಳನ್ನು ಸವಿಯುತ್ತಾರೆ. ಎರಡನೇ ದಿನ ಹೊಸ ತೊಡಕು ಅಂಗವಾಗಿ ಮಾಂಸದ ತರಹೇವಾರಿ ಖಾದ್ಯಗಳೊಂದಿಗೆ ಹಬ್ಬ ಸಂಪನ್ನಗೊಳಿಸುತ್ತಾರೆ. ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಹೊಸ ತೊಡಕು ವಿಜೃಂಭಣೆಯಿಂದ ನಡೆಯುತ್ತದೆ.



