ಫೈನಾನ್ಸ್ ಕಿರುಕುಳ ತಾಳಲಾರದೆ ಬಾವಿಗೆ ಹಾರಿ ಪ್ರಾಣಬಿಟ್ಟ ಮಹಿಳೆ!

0
Spread the love

ಬೆಳಗಾವಿ:- ಬೆಳಗಾವಿ ತಾಲೂಕಿನ ಯಮನಾಪುರ ಗ್ರಾಮದ ಹೊರ ವಲಯದಲ್ಲಿ ಫೈನಾನ್ಸ್ ಕಿರುಕುಳ ತಾಳಲಾರದೆ ಬಾವಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.

Advertisement

52 ವರ್ಷದ ಕಿರಬಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ಗುರುತಿಸಲಾಗಿದೆ. ಮಹಿಳೆಗೆ ಫೈನಾನ್ಸ್ನಲ್ಲಿ ಸಬ್ಸಿಡಿ ಎಂದು ಹೇಳಿ ಹೊಳೆಪ್ಪ ದಡ್ಡಿ ಎಂಬುವವರು 2.30 ಲಕ್ಷ ರೂ. ಕೊಡಿಸಿದ್ದ. ಕೊಡಿಸಿದ ಅರ್ಧದಷ್ಟು ಸಾಲ ತನಗೆ ಕೊಟ್ಟರೆ ತಾನೇ ಸಾಲ ಕಟ್ಟುವುದಾಗಿ ಹೇಳಿದ್ದ. ಆದರೆ ಆತನ ನಂಬಿ ಸಾಲ ಪಡೆದು ಅರ್ಧದಷ್ಟು ಹಣವನ್ನು ಸರೋಜಾ ಹೊಳೆಪ್ಪಗೆ ನೀಡಿದ್ದರು. ಅರ್ಧ ಸಾಲ ಕಟ್ಟಿದ ಬಳಿಕ ಫೈನಾನ್ಸ್ನಿಂದ ಪೂರ್ತಿ ಸಾಲ ಕಟ್ಟಲು ಸೂಚನೆ ನೀಡಿದ್ದಾರೆ. ಈ ವೇಳೆ ತಾನೂ ಹಣ ಕಟ್ಟುವುದಿಲ್ಲ, ಸಬ್ಸಿಡಿಯಾಗಿ ಸಾಲ ಪಡೆದಿದ್ದೇನೆ ಎಂದು ಸರೋಜ ಹೇಳಿದ್ದಾರೆ. ತಾವು ಸಬ್ಸಿಡಿ ಸಾಲ ಕೊಟ್ಟಿಲ್ಲ ಪೂರ್ತಿ ಹಣ ಕಟ್ಟಿ ಎಂದು ಫೈನಾನ್ಸ್ ಸಿಬ್ಬಂದಿ ನಿತ್ಯ ಕಿರುಕುಳ ನೀಡಿದ್ದಾರೆ. ಈ ವೇಳೆ ಅರ್ಧ ಸಾಲ ಪಡೆದ ಹೊಳೆಪ್ಪ ಸಹ ಸಾಲ ಕಟ್ಟುವುದಿಲ್ಲವೆಂದು ಕೈ ಎತ್ತಿದ್ದಾನೆ.

ಈ ಎಲ್ಲಾ ಕಿರುಕುಳ ತಾಳಲಾರದೇ ಸರೋಜಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಮಧ್ಯಸ್ಥಿಕೆ ವಹಿಸಿ ಸಾಲ ಕೊಡಿಸಿದ್ದ ಹೊಳೆಪ್ಪನ ವಿರುದ್ಧ ಕಾಕತೀ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here