ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಮಂದಿ ಸೂಸೈಡ್!

0
Spread the love

ಹರ್ಯಾಣ:- ಇಲ್ಲಿನ ಹರ್ಯಾಣದ ಪಂಚಕುಲದಲ್ಲಿ ಸಾಲ ಬಾಧೆಯಿಂದ ಬಳಲುತ್ತಿದ್ದ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಕುಟುಂಬವು ಭಾರೀ ಸಾಲ ಮತ್ತು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದರಿಂದ ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಪ್ರವೀಣ್ ಮಿತ್ತಲ್, ಪಂಚಕುಲದ ಬಾಗೇಶ್ವರ ಧಾಮದಲ್ಲಿ ತಮ್ಮ ಕುಟುಂಬದೊಂದಿಗೆ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಕುಟುಂಬವು ಡೆಹ್ರಾಡೂನ್‌ಗೆ ಹಿಂತಿರುಗುತ್ತಿದ್ದಾಗ ಭಾನುವಾರ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕುಟುಂಬವನ್ನು ಮೊದಲು ಸ್ಥಳೀಯರು ನೋಡಿದ್ದಾರೆ. ಕಾರಿನೊಳಗೆ ಅವರು ಕಷ್ಟಪಡುತ್ತಿರುವುದನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕುಟುಂಬ ಸದಸ್ಯರನ್ನು ರಕ್ಷಿಸಿದರು.

ನಂತರ, ಅವರನ್ನು ಖಾಸಗಿ ಮತ್ತು ನಾಗರಿಕ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅವರೆಲ್ಲರೂ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು. ಮೃತರನ್ನು 42 ವರ್ಷದ ಪ್ರವೀಣ್ ಮಿತ್ತಲ್, ಅವರ ಪೋಷಕರು, ಪತ್ನಿ ಮತ್ತು ಮೂವರು ಮಕ್ಕಳು – ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಎಂದು ಗುರುತಿಸಲಾಗಿದೆ.

ಆರಂಭಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣದಂತೆ ಕಂಡುಬಂದಿದೆ. ವಿಧಿವಿಜ್ಞಾನ ತಂಡವು ಸ್ಥಳಕ್ಕೆ ತಲುಪಿದೆ. ಅಪರಾಧ ಸ್ಥಳದಿಂದ ಎಲ್ಲಾ ಪುರಾವೆಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here