ಮಂಡ್ಯ: ಸಾಲಬಾಧೆಯಿಂದ ಬೇಸತ್ತು ರೈತ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿದರಕೆರೆ ಗ್ರಾಮದಲ್ಲಿ ನಡೆದಿದೆ.
Advertisement
ಗ್ರಾಮದ ಪದ್ಮರಾಜ್(55)ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಒಂದು ಎಕರೆ ಜಮೀನು ಹೊಂದಿದ್ದ ರೈತ ತರಕಾರಿ ಬೆಲೆ ಬೆಳೆಯುತ್ತಿದ್ದರು. ಕೃಷಿಗಾಗಿ ಬ್ಯಾಂಕ್ ಸೇರಿದಂತೆ ಹಲವೆಡೆ 5 ಲಕ್ಷಕ್ಕೂ ಸಾಲ ಮಾಡಿದ್ದರು.
ತರಕಾರಿ ಬೆಳೆ ಸರಿಯಾಗಿ ಬರದೆ ಬೆಳೆಗೆ ಸೂಕ್ತ ಬೆಲೆ ಸಿಗದೆ ರೈತ ಕಂಗಾಲಾಗಿದ್ದರು. ಅದಲ್ಲದೆ ಸಾಲದ ಒತ್ತಡ ಹೆಚ್ಚಾಗಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಿಂಡಗನವಿಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.