ಬೆಂಗಳೂರು ಗ್ರಾಮಾಂತರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ಜರುಗಿದೆ. ಗಂಡ, ಇಬ್ಬರು ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಡ ಶಿವು (32), ಮಗಳು ಚಂದ್ರಕಳಾ (11) ಮಗ ಉದಯ್ ಸೂರ್ಯ (07)
ಮೃತ ದುರ್ಧೈವಿಗಳಾಗಿದ್ದು, ಅದೃಷ್ಟವಶಾತ್ ತಾಯಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಪತಿ ಅಪಘಾತದಲ್ಲಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆಗಾಗಿ ಕುಟುಂಬ ಸಾಲ ಮಾಡಿಕೊಂಡಿತ್ತು. ಸಾಲ ಹೆಚ್ಚಾಗಿದ್ದರಿಂದ ದಂಪತಿ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆ. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಅಂತ ಮಕ್ಕಳನ್ನೂ ಸಾಯಿಸುವ ನಿರ್ಧಾರ ಮಾಡಿದ್ದಾರೆ.
ಮೊದಲಿಗೆ ಗಂಡ ಮತ್ತು ಮಕ್ಕಳ ಕುತ್ತಿಗೆಯನ್ನ ವೇಲ್ನಿಂದ ಹೆಂಡತಿ ಕೊಲೆ ಮಾಡಿದ್ದಾಳೆ. ಬಳಿಕ ತಾನೂ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾಳೆ. ಹಗ್ಗ ತುಂಡಾದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸದ್ಯ ಮಹಿಳೆಗೆ ಹೊಸಕೋಟೆ ಸರ್ಕಾರಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



