ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ…!

0
Spread the love

ರಾಯಚೂರು: ಸಾಲಬಾಧೆ ತಾಳದೆ ತಾಲೂಕಿನ ಗೋನಾಳ ಗ್ರಾಮದ  ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ರೈತ ಬಸವರಾಜ (55) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ ಆಗಿದ್ದು, ಐದು ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿದ್ದ ರೈತ, ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ.

ಸಾಲ ಬಾಧೆ ತಾಳಲಾರದೆ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 


Spread the love

LEAVE A REPLY

Please enter your comment!
Please enter your name here