ಯಾದಗಿರಿ: ಸಾಲಬಾಧೆ ತಾಳಲಾರದೆ ಮನನೊಂದು ರೈತನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸುಗೂರು ಗ್ರಾಮದಲ್ಲಿ ನಡೆದಿದೆ. ಬಸವರಾಜ(47) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು, ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿರುವ ಮರಕ್ಕೆ ನಿನ್ನೆ ತಡರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Advertisement
ಬ್ಯಾಂಕ್ ಹಾಗೂ ಕೈಸಾಲ ಸೇರಿ 5 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. 4 ಎಕರೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದನು. ಅಧಿಕ ಮಳೆಯಿಂದ ಹತ್ತಿ ಬೆಳೆ ನಷ್ಟವಾಗಿತ್ತು. ಬೆಳೆ ಹಾನಿ ಹಾಗೂ ಸಾಲಬಾಧೆಯಿಂದ ನೊಂದಿದ್ದ ರೈತ ಬಸವರಾಜ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.