ಅಮರಾವತಿ: ಅಮೆರಿಕದ ವೀಸಾ ಸಿಗದಿದ್ದಕ್ಕೆ ಮಹಿಳಾ ವೈದ್ಯೆಯೋರ್ವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ಜರುಗಿದೆ.
38 ವರ್ಷದ ರೋಹಿಣಿ ಮೃತ ವೈದ್ಯೆ. ಎಷ್ಟೇ ಬಾಗಿಲು ಬಡಿದರೂ ತೆಗೆಯದೇ ಇದ್ದಾಗ ಅನುಮಾನಗೊಂಡ ಮನೆಕೆಲಸದಾಕೆ ಹೈದರಾಬಾದ್‌ನ ಅದೇ ನಗರದಲ್ಲಿ ವಾಸಿಸುತ್ತಿದ್ದ ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಮನೆಯವರು ಬಾಗಿಲು ಒಡೆದು ನೋಡಿದಾಗ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಅತಿಯಾದ ನಿದ್ರೆ ಮಾತ್ರೆ ಸೇವಿಸಿ ಅಥವಾ ಇಂಜೆಕ್ಷನ್ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಎಂದು ಪೊಲೀಸರು ಶಂಕಿಸಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ವರದಿ ಬಂದ ಬಳಿಕ ನಿಖರ ಕಾರಣ ತಿಳಿಯುವುದಾಗಿ ಪೋಲೀಸರು ತಿಳಿಸಿದ್ದಾರೆ.
ಮಹಿಳಾ ವೈದ್ಯೆ ಆತ್ಮಹತ್ಯೆ ಬಳಿಕ ಪೊಲೀಸರ ಶೋಧದ ವೇಳೆ ಡೆತ್ ನೋಟ್ ಪತ್ತೆಯಾಗಿದೆ. ಇದರಲ್ಲಿ ಆಕೆ ಅಮೆರಿಕದ ವೀಸಾ ತಿರಸ್ಕರಿಸಿದ್ದಕ್ಕಾಗಿ ಖಿನ್ನತೆಗೆ ಒಳಗಾಗಿದ್ದೆ ಎಂದು ಬರೆದಿದ್ದಾರೆ.



