ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಎಚ್‌ಎಂಟಿ ಲೇಔಟ್ ನಲ್ಲಿ ಬೃಹದಾಕಾರದ ಮರ ಧರೆಗುರುಳಿದೆ. ಹೌದು ರಾತ್ರಿ ಶುರುವಾದ ಮಳೆಯು ಬೆಳಗಾದರೂ ಬಿಟ್ಟಿಲ್ಲ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮೆಜೆಸ್ಟಿಕ್ ರೈಲ್ವೆ ಅಂಡರ್ ಪಾಸ್ ಜಲಾವೃತಗೊಂಡಿತ್ತು. ಇದರಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.
Advertisement
ಬೆಳಗ್ಗೆ 5 ಗಂಟೆ ಸುಮಾರಿಗೆ ಮರ ಬಿದ್ದಿದ್ದು, ಮನೆ ಮುಂದೆ ನಿಲ್ಲಿಸಿದ್ದ ಕಾರು ಜಖಂಗೊಂಡಿದೆ. 3 ತಿಂಗಳ ಹಿಂದೆ ಮರ ತೆರವು ಮಾಡುವಂತೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.
ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು ಹಾಗೂ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಸೇರಿದಂತೆ ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರಕನ್ನಡಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.