ಅಲ್ಪಸಂಖ್ಯಾತರ ಓಲೈಕೆಗಾಗಿ ಸಂವಿಧಾನ ವಿರೋಧಿ ನೀತಿ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ಕಿಡಿ!

0
Spread the love

ಕಲಬುರಗಿ:- ಕಾಂಗ್ರೆಸ್ ಪಕ್ಷವು ಅಲ್ಪಸಂಖ್ಯಾತರ ಓಲೈಕೆಗಾಗಿ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾಗಿ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಂಡವಾಳ ಬಯಲಾಗಿದೆ. ಒಂದು ವೇಳೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆಶಿ ಸಹಿತ ರಾಹುಲ್ ಗಾಂಧಿ ಅಪಪ್ರಚಾರ ಮಾಡಿದ್ದರು. ಆದರೆ,
ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ್ ಅಧಿಕಾರವಧಿಯಲ್ಲಿಯೇ ಸಂವಿಧಾನದಲ್ಲಿ ಅತೀ ಹೆಚ್ಚು ತಿದ್ದುಪಡಿ ಮಾಡಲಾಗಿದೆ ಎಂದು ಕಿಡಿಕಾರಿದರು.

ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್ ಪಕ್ಷದ ನಾಯಕರು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳುತ್ತಾ ಬಂದಿದ್ದಾರೆ. ಇದರಿಂದ ಅಂಬೇಡ್ಕರ್ ಅವರಿಗೆ ಇವರು ಎಷ್ಟು ಗೌರವ ಕೊಡುತ್ತಾರೆ ಎಂಬುದು ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಹಾಗೂ ಡಿಸಿಎಂ ಅವರು ಮುಸ್ಲಿಮರ ಓಲೈಕೆಗಾಗಿ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಂವಿಧಾನ ಮತ್ತು ಅಂಬೇಡ್ಕರ್ ಅವರ ಕುರಿತಾಗಿ ಅಪಾರವಾದ ಗೌರವ ಇರುವ ಕಾರಣಕ್ಕಾಗಿ ಯಾವುದೇ ಕಾರಣಕ್ಕೂ ಸಂವಿಧಾನ ತಿದ್ದುಪಡಿಗೆ ಅವಕಾಶ ನೀಡುವುದಿಲ್ಲ. ಹಾಗಾಗಿ, ತಾವು ಡಿಕೆಶಿ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು.


Spread the love

LEAVE A REPLY

Please enter your comment!
Please enter your name here