ಪತ್ತೆಯಾಗದ ಚಿರತೆ: ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಮುಂದುವರಿದ ಕಾರ್ಯಾಚರಣೆ!

0
Spread the love

ಮೈಸೂರು:- ಕಳೆದ ಕೆಲವು ದಿನಗಳ ಹಿಂದೆ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಇದುವರೆಗೂ ಪತ್ತೆಯಾಗಿಲ್ಲ ಎಂದು ಡಿಸಿಎಫ್ ಡಾ. ಬಸವರಾಜ್ ಮಾಹಿತಿ ನೀಡಿದ್ದಾರೆ.

Advertisement

ಈ ಬಗ್ಗೆ ಮಾತನಾಡಿದ ಅವರು, ಕಳೆದ ನಾಲ್ಕು ದಿನಗಳಿಂದ ಕ್ಯಾಮೆರಾಗಳಲ್ಲಿ ಚಿರತೆ ಕಾಣಿಸಿಲ್ಲ. ಡ್ರೋನ್ ಕ್ಯಾಮೆರಾ, ಕ್ಯಾಂಪಸ್ ಸಿಸಿ ಟಿವಿಗಳಲ್ಲಿ ಚಿರತೆ ಕಾಣಿಸಿಲ್ಲ. ಕ್ಯಾಂಪಸ್‌ಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲೂ ಕಾರ್ಯಾಚರಣೆ ನಡೆದಿದೆ. 70 ಇನ್ಫೋಸಿಸ್ ಸಿಬ್ಬಂದಿ ಸೇರಿ 12 ತಂಡಗಳಿಂದ ಕಾರ್ಯಾಚರಣೆ ನಡೆದಿದೆ ಎಂದರು.

ಇನ್ನೂ ಮೈಸೂರಿನ ಇನ್ಫೋಸಿಸ್‌ನಲ್ಲಿ ಚಿರತೆ ಕಾರ್ಯ ಪಡೆ, ಆನೆ ಕಾರ್ಯ ಪಡೆ, 70 ಇನ್ಫೋಸಿಸ್ ಸಿಬ್ಬಂದಿ ಸೇರಿ 12 ಜಂಟಿ ತಂಡಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಳೆದ 4 ದಿನಗಳಿಂದ ಇಲ್ಲಿಯವರೆಗೂ ಕ್ಯಾಮೆರಾ ಟ್ರ್ಯಾಪ್ ಗಳಲ್ಲಿಯಾಗಲೀ ಡ್ರೋನ್ ಕ್ಯಾಮೆರಾ, ಕ್ಯಾಂಪಸ್ ಸಿಸಿ ಕ್ಯಾಮೆರಾಗಳಲ್ಲಾಗಲೀ ಚಿರತೆ ಕಾಣಿಸಿಲ್ಲ. ಚಿರತೆ ಚಲನವಲನ ಹೆಜ್ಜೆ ಗುರುತು ಅಥವಾ ಯಾವುದೇ ರೀತಿಯ ಚಿರತೆ ಇರುವಿಕೆಯ ಕುರುಹುಗಳು ಕಂಡು ಬಂದಿಲ್ಲ. ಕ್ಯಾಂಪಸ್‌ಗೆ ಹೊಂದಿಕೊಂಡಂತಿರುವ ಪ್ರದೇಶಗಳಲ್ಲಿಯೂ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೂ ಚಿರತೆ ಪತ್ತೆಯಾಗಿಲ್ಲ.

ಈಗಾಗಲೇ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಕಾಣಿಸಿಕೊಂಡ ಚಿರತೆ ಇನ್ನೂ ಸೆರೆಯಾಗದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ನೀಡಲಾಗಿದೆ. 2 ವಾರಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಆದರೆ, ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here