ದಾಖಲೆ ಇಲ್ಲದ ರೂ. 4,97,600 ನಗದು ವಶಕ್ಕೆ

0
checkpost
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಮಾರ್ಚ್ 25ರ ರಾತ್ರಿ 11.34 ಗಂಟೆಯ ಸುಮಾರಿಗೆ ತೇಗೂರ ಚೆಕ್ ಪೋಸ್ಟ್ನಲ್ಲಿ ಕೆಎಸ್‌ಆರ್‌ಟಿಸಿ ಬಸ್ ತಪಾಸಣೆ ಮಾಡಿದಾಗ ದಾಖಲೆ ಇಲ್ಲದ 4,97,600 ರೂ ನಗದು ಹಣ ಪತ್ತೆಯಾಗಿದ್ದು, ಹಣ ವಶಕ್ಕೆ ಪಡೆದು ಸೂಕ್ತ ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

Advertisement

ಈ ಕುರಿತು ಪ್ರಕಟಣೆ ನೀಡಿರುವ ಅವರು, ನಿಪ್ಪಾಣಿಯಿಂದ ಭದ್ರಾವತಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕೆಎ-14, ಎಫ್-0083 ಅನ್ನು ನಿಲ್ಲಿಸಿ, ತೇಗೂರ ಚೆಕ್ ಪೋಸ್ಟ್ನಲ್ಲಿ ಎಸ್‌ಎಸ್‌ಟಿ ಮತ್ತು ಎಫ್‌ಎಸ್‌ಟಿ ತಂಡದ ಅಧಿಕಾರಿಗಳು ತಪಾಸಣೆ ಮಾಡಿದಾಗ ಚಿಕ್ಕಮಂಗಳೂರಿನ ಮಸೂದ್ ಎಂಬ ವ್ಯಕ್ತಿ ಬಳಿ ಸೂಕ್ತ ದಾಖಲೆಗಳಿಲ್ಲದ 4,97,600 ರೂ ಹಣ ಪತ್ತೆ ಆಗಿತ್ತು. ವಿಚಾರಣೆ ನಂತರ ಹಣವನ್ನು ವಶಕ್ಕೆ ಪಡೆದು ಜಿಲ್ಲಾ ಖಜಾನೆಯಲ್ಲಿ ಠೇವಣಿ ಮಾಡಲಾಗಿದೆ.

ಜಿಲ್ಲಾ ಎಂಸಿಸಿ ನೋಡಲ್ ಅಧಿಕಾರಿ ಮೋನಾ ರಾವುತ ಮಾರ್ಗದರ್ಶನದಲ್ಲಿ ಎಸಿ ಶಾಲಂ ಹುಸೇನ್, ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಎಂಸಿಸಿ ಅಧಿಕಾರಿ ಶಿವಪುತ್ರಪ್ಪ ಹೊಸಮನಿ, ಮ್ಯಾಜಿಸ್ಟ್ರೇಟ್ ಗಳಾದ ಪ್ರವೀಣ ಶಿಂಧೆ, ಮಂಜುನಾಥ ಹಿರೇಮಠ ಕ್ರಮವಹಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here