ಹಾಸನ: ಪೊಲೀಸರ ಮೇಲೆ ಇಲ್ಲಸಲ್ಲದ ಆರೋಪ ಮಾಡಬಾರದು ಎಂದು ಪೊಲೀಸರು ಕುಡಿದು ಕರ್ತವ್ಯಕ್ಕೆ ಬರುತ್ತಾರೆ ಎಂಬ ರೇವಣ್ಣ ಅವರ ಆರೋಪಕ್ಕೆ ಸಂಸದ ಶ್ರೇಯಸ್ ಪಟೇಲ್ ತಿರುಗೇಟು ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
Advertisement
ಗಲಾಟೆಯಾದ ಸಂದರ್ಭದಲ್ಲಿ ಪೊಲೀಸರು ನಿಭಾಯಿಸುತ್ತಾರೆ. ಪೊಲೀಸರ ಮೇಲೆ ಇಲ್ಲಸಲ್ಲದ ಆರೋಪ ಮಾಡಬಾರದು. ಎಣ್ಣೆ ಕುಡಿದು ಬಂದು ಡ್ಯೂಟಿ ಮಾಡಿದ್ರೆ ಸಾಕ್ಷಿ, ಪುರಾವೆಗಳಿದ್ದರೆ ಕೊಡಲಿ. ಇವರ ಕಾಲದಲ್ಲಿ ಏನೇನು ಆಗಿದೆ ಎಂದು ಗೊತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ರಾಜ್ಯಕ್ಕೆ ಇವರ ಕಾಲದಲ್ಲಿ ಯಾವ ಗ್ಯಾರೆಂಟಿ ಕೊಟ್ಟಿದ್ದಾರೆ? ನಾವು ಕೆಲಸ ಮಾಡುತ್ತಿದ್ದೇವೆ, ಮುಂದೆ ಸಹ ಮಾಡಿ ತೋರಿಸುತ್ತೇವೆ. ಅವರು ಹಿರಿಯರಿದ್ದಾರೆ ಅಭಿವೃದ್ಧಿಗೆ ಕೈ ಜೋಡಿಸಲಿ, ಸಲಹೆ ನೀಡಲಿ, ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡೋಣ. ಹಾಸನ ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಸಲಹೆ, ಸಹಕಾರ ನೀಡಲಿ ಎಂದು ತಿರುಗೇಟು ಕೊಟ್ಟಿದ್ದಾರೆ.