ಮಂಡ್ಯ: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬಾಚನಹಳ್ಳಿ ಗ್ರಾಮದ ಬಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನಡೆದಿದೆ.
Advertisement
ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿರತೆ ರಸ್ತೆ ಬದಿ ಹಾರಿ ಬಿದ್ದಿದೆ. ಸುಮಾರು ಮೂರು ವರ್ಷದ ಗಂಡು ಚಿರತೆ ಸಾವಿಗೀಡಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


