ಹುಬ್ಬಳ್ಳಿ: ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
Advertisement
ಇಬ್ಬರ ದೇಹಗಳು ಛಿದ್ರ ಛಿದ್ರವಾಗಿವೆ. ಹೆದ್ದಾರಿ ಬಳಿಯ ಬೈಪಾಸ್‌ನಲ್ಲಿ ಅವಘಡ ನಡೆದಿದೆ. ಮೃತ ಇಬ್ಬರೂ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ದೇಹಗಳು ಛಿದ್ರ ಛಿದ್ರವಾಗಿವೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.