ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕೊಪ್ಪಳ ಬಂದ್ ಯಶಸ್ವಿ

0
Spread the love

ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ಬಗೆಗಿನ ಅವಹೇಳನಕಾರಿ ಹೇಳಿಕೆ ಖಂಡಿಸಿ ಕೊಪ್ಪಳ ಜಿಲ್ಲೆ ಬಂದ್ ನಡೆಸಿ, ರಾಷ್ಟçಪತಿ ದ್ರೌಪದಿ ಮುರ್ಮು ಅವರಿಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

Advertisement

ಜಿಲ್ಲಾ ಕೇಂದ್ರ ಕೊಪ್ಪಳ-ಭಾಗ್ಯನಗರ ಅವಳಿ ನಗರಗಳಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಎಲ್ಲಾ ಅಂಗಡಿಕಾರರು ಸ್ವಯಂ ಪ್ರೇರಣೆಯಿಂದ ಬಂದ್ ಮಾಡಿ ಬಂದ್ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಅಶೋಕ ವೃತ್ತದ ಸುತ್ತ ಮಾನವ ಸರಪಳಿ ರಚಿಸಿ ನಂತರ ಪ್ರತಿಭಟನಾಕಾರರು ಮಧ್ಯಾಹ್ನದ ಸುಮಾರಿಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ರಾಷ್ಟಿçÃಯ ಹೆದ್ದಾರಿಯಿಂದ ಸಾಲಾರ್ ಜಂಗ್ ರಸ್ತೆ ಮೂಲಕ ಅಶೋಕ ವೃತ್ತ ತಲುಪಿ ಬೃಹತ್ ಬಹಿರಂಗ ಸಭೆ ನಡೆಸಿದರು.

ಸಂವಿಧಾನ ಸಂರಕ್ಷಣಾ ಸಮಿತಿಯ ಮುಖಂಡ ಹನುಮೇಶ್ ಕಡೆಮನಿ ಮಾತನಾಡಿ, ಡಾ. ಅಂಬೇಡ್ಕರರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ದೇಶದಿಂದ ಗಡಿಪಾರು ಮಾಡಬೇಕು. ಇಂಥವರಿಂದ ದೇಶದಲ್ಲಿ ಅಶಾಂತಿಯಾಗುತ್ತಿದೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ಇಡೀ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತನಾಡಿ, ಎಲ್ಲಾ ಸಮಾಜದವರಿಗೂ ಸಮಾನತೆಯನ್ನು, ನಮಗಾಗಿ ಹಕ್ಕನ್ನು ಕೊಟ್ಟಿರುವ ಬಾಬಾ ಸಾಹೇಬ್ ಅವರ ಅವರ ತಂಟೆಗೆ ಬಂದರೆ ಇಡೀ ದೇಶದಲ್ಲಿ ಅಶಾಂತಿ ಮೂಡುತ್ತದೆ ಎಂದರು.

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ಮುಖಂಡರಾದ ರಾಮಣ್ಣ ಚೌಡಕಿ, ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರ, ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಬಸವರಾಜ ಶೀಲವಂತರ್, ದಲಿತ ಸಂಘಟನೆಯ ನಾಯಕ ಸಿದ್ದರಾಮ ಹೊಸಮನಿ, ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ್, ದಲಿತ ಪರ ಸಂಘಟನೆ ಹಿರಿಯ ನಾಯಕ ಟಿ.ರತ್ನಾಕರ, ಯಮನೂರಪ್ಪ ನಾಯ್ಕ ಮುಂತಾದವರು ಮಾತನಾಡಿದರು

ಕೆ.ಬಿ. ಗೋನಾಳ, ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್.ಎ. ಗಫಾರ್, ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ತುಕಾರಾಮ್ ಪಾತ್ರೋಟಿ, ಪರುಶುರಾಮ ಕೆರೆಹಳ್ಳಿ, ಜ್ಯೋತಿ ಗೊಂಡಬಾಳ, ಕಾಶಪ್ಪ ಚಲವಾದಿ, ಸುಕ್ರಾಜ್ ತಾಳಕೇರಿ, ನಿಂಗಪ್ಪ ಜಿ.ಎಸ್. ಬೆಣಕಲ್ಲ, ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ನಾಯಕ ಕರಿಯಪ್ಪ ಗುಡಿಮನಿ, ಆದಿಲ್ ಪಟೇಲ್, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುದುಕಪ್ಪ ಹೊಸಮನಿ, ಈಶಪ್ಪ ಶಿರೂರು, ಕೌಸರ್ ಕೋಲ್ಕಾರ್, ಯಲ್ಲಪ್ಪ ಬಳಗಾನೂರ, ಗವಿಸಿದ್ದಪ್ಪ ಬೆಲ್ಲದ್, ಮಖಬೂಲ್ ರಾಯಚೂರು ಮುಂತಾದವರು ಭಾಗವಹಿಸಿದ್ದರು.

ಬಂಡಾಯ ಸಾಹಿತಿ ಬಸವರಾಜ ಸೂಳಿಬಾವಿ ಮಾತನಾಡಿ, ಗೃಹ ಸಚಿವರಿಗೂ, ಸಾಮಾನ್ಯ ಜನರಿಗೂ ಅಷ್ಟೇ ಗೌರವ ಸಿಗಬೇಕು ಎಂದು ಹೇಳಿದವರು ಅಂಬೇಡ್ಕರ್. ಅಂಬೇಡ್ಕರ್ ಅವರಿಂದ ಅಸ್ಥಿತ್ವಕ್ಕೆ ಬಂದ ಸಂವಿಧಾನದಿAದಲೇ ಅಮಿತ್ ಶಾ ಗೃಹ ಸಚಿವರಾಗಿದ್ದಾರೆ ಎಂಬುದು ಗಮನಕ್ಕಿರಲಿ ಎಂದರು.


Spread the love

LEAVE A REPLY

Please enter your comment!
Please enter your name here