ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.
ಇಂದು ಮುಂಜಾನೆ ಕೊಚ್ಚಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇಗುಲದಲ್ಲಿ ಪವಿತ್ರ ಮಾಲೆ ಧರಿಸಿ ಯಾತ್ರೆಗೆ ಚಾಲನೆ ನೀಡಿದ್ದಾರೆ.
ಮೂಲಗಳ ಪ್ರಕಾರ, ಅವರು ರಾತ್ರಿ 8 ಗಂಟೆಗೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ದರ್ಶನ ಪಡೆಯಲಿದ್ದಾರೆ. ಬಳಿಕ ಸುಮಾರು ಎರಡು ಗಂಟೆಗಳ ಕಾಲ ಪಡಿಪೂಜೆ ಸೇರಿದಂತೆ ವಿಶೇಷ ಪೂಜೆಗಳನ್ನು ಸಲ್ಲಿಸಲಿದ್ದಾರೆ.
ಈ ಯಾತ್ರೆಯಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್, ಸಿ.ಎಸ್. ಪುಟ್ಟರಾಜು, ಜೆಡಿಎಲ್‌ಪಿ ನಾಯಕ ಸುರೇಶ್ ಬಾಬು ಹಾಗೂ ಎಂಎಲ್ಸಿ ಭೋಜೇಗೌಡ ಸೇರಿದಂತೆ ಸುಮಾರು 30 ಭಕ್ತರ ತಂಡ ಭಾಗವಹಿಸಿದೆ.
ಶ್ರದ್ಧಾ ಭಕ್ತಿಯೊಂದಿಗೆ ಆರಂಭವಾದ ಈ ಯಾತ್ರೆ ಇಂದು ಸಂಜೆ ಅಯ್ಯಪ್ಪ ಸ್ವಾಮಿ ದರ್ಶನದೊಂದಿಗೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.



